ಮೈಸೂರು: ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಶಂಕಿತರು ಮತ್ತು ಹಕ್ಕಿಜ್ವರದ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೆಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಹಲವಾರು ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಕೊರೊನಾ ಮತ್ತು ಹಕ್ಕಿಜ್ವರದ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿಸಬಾರದು. ಅಂತಹ ಕೃತ್ಯ ಎಸಗಿದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.