ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
27 ವರ್ಷಗಳ ನಂತರ ಮೊದಲ ಬಾರಿಗೆ ದೀಪಾವಳಿ ಅಮವಾಸ್ಯೆಯ ಸಂದರ್ಭದಲ್ಲಿ ಬಂದಿರುವ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮಂಗಳವಾರ (ಅ.25) ಮದ್ಯಾಹ್ನ 1 ಗಂಟೆಯಿಂದ ಚಾಮುಂಡೇಶ್ವರಿ ತಾಯಿಯ ದರ್ಶನ ಇರುವುದಿಲ್ಲ.
ಆದರೆ ಗ್ರಹಣದ ಪ್ರಾರಂಭ ಸ್ಪರ್ಷಕಾಲ ಮತ್ತು ಮೋಕ್ಷ ಕಾಲ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಗ್ರಹಣ ಬಿಟ್ಟ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಯಿಂದ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ದೀಪಾವಳಿ ಹಬ್ಬದಂದು ಸೂರ್ಯ ಗ್ರಹಣ: ಗ್ರಹಣದ ಪರಿಣಾಮ, ಪಾಲನೆ, ಪೂಜಾ ವಿಧಾನ ಹೇಗಿರಬೇಕು?