ನಾಳೆ ಮತ್ತು ಆ. 20ರಂದು ಭಕ್ತಾದಿಗಳಿಗೆ ಚಾಮುಂಡಿ ದರ್ಶನಕ್ಕೆ ನಿರ್ಬಂಧ - ಆಗಸ್ಟ್ 13 - 20 ರಂದು ಚಾಮುಂಡಿ ಬೆಟ್ಟದಲ್ಲಿ ಪ್ರವೇಶ ನಿಷೇಧ
ಆಗಸ್ಟ್ 13 ರಂದು ನಾಗರ ಪಂಚಮಿ ಹಾಗೂ ಆ. 20ರಂದು ವರಮಹಾಲಕ್ಷ್ಮಿ ಹಬ್ಬ ಇರುವುದರಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಹೀಗಾಗಿ, ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ.

ಚಾಮುಂಡೇಶ್ವರಿ ದೇವಾಲಯ
ಮೈಸೂರು: ರಾಜ್ಯದಲ್ಲಿ ಕೋವಿಡ್ 3ನೇ ಅಲೆಯ ಭೀತಿ ಶುರುವಾಗಿದ್ದು, ಸರ್ಕಾರ ಕೊರೊನಾ ಸೋಂಕು ನಿಯಂತ್ರಣಕ್ಕೆ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ನಾಗರ ಪಂಚಮಿ ಹಾಗೂ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಆಗಸ್ಟ್ 13(ನಾಳೆ) ನಾಗರ ಪಂಚಮಿ ಹಾಗೂ ಆ. 20ರಂದು ವರಮಹಾಲಕ್ಷ್ಮಿ ಹಬ್ಬ ಇರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ನಿರ್ಬಂಧ ವಿಧಿಸಿದ್ದಾರೆ.

ಕೊರೊನಾ ಹಿನ್ನೆಲೆ ಆಷಾಢ ಮಾಸದಲ್ಲಿ ಪ್ರವೇಶ ನಿಷೇಧಿಸಲಾಗಿತ್ತು. ಇದೀಗ ಮತ್ತೆರೆಡು ದಿನ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಓದಿ: ರಾಜ್ಯದಲ್ಲಿ ಯಾರೇ ಸಿಎಂ ಆದರೂ ಒಂದು ರೀತಿಯ ಮಕ್ಕಳ ಆಟ ನಿರ್ಮಾಣವಾಗಿದೆ: ಕುಮಾರಸ್ವಾಮಿ