ಮೈಸೂರು: ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಶನಿವಾರ ಮತ್ತು ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿಷೇಧ ಮುಂದುವರಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ದಿನನಿತ್ಯ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಶನಿವಾರ ಮತ್ತು ಭಾನುವಾರ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
20-07-2020ರ ಸೋಮವಾರ ಅಮವಾಸ್ಯೆ ಇರುವುದರಿಂದ, ಅಂದು ಸಹ ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರುವ ಹಿನ್ನೆಲೆ, ಸೋಮವಾರವೂ ಸಹ ಭಕ್ತರಿಗೆ ನಿಷೇಧ ವಿಧಿಸಲಾಗಿದೆ.
ಆಷಾಡ ಮಾಸದ 4 ಶುಕ್ರವಾರಗಳಿಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ವಿಧಿಸಿದ್ದ ನಿರ್ಬಂಧ ತೆಗೆಯಲಾಗಿದ್ದು, ಶನಿವಾರ ಮತ್ತು ಭಾನುವಾರ ಮಾತ್ರ ನಿರ್ಬಂಧ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಮುಂದಿನ ಆದೇಶದವರೆಗೆ ವಾರಾಂತ್ಯದ ಈ ಎರಡು ದಿನಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.