ETV Bharat / state

ಅಗತ್ಯ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ: ಜಿಲ್ಲಾಧಿಕಾರಿ ಅಭಿರಾಮ್ ಜಿ .ಶಂಕರ್ - corona virus update news

ನಿತ್ಯ ಅಗತ್ಯ ವಸ್ತುಗಳನ್ನು ಸಾಗಿಸುವ ಸರಕು ವಾಹನಗಳಿನ್ನು ನಿರ್ಬಂಧಿಸಿಲ್ಲ. ಈ ಬಗ್ಗೆ ಜಿಲ್ಲೆಯ ಪೊಲೀಸ್ ಆಯುಕ್ತರ ಜೊತೆ ಮಾತನಾಡಿ, ರೈತರಿಗೆ ತೊಂದರೆ ಆಗದಂತೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಂತರ್ಜಾಲದ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ ಅಂತ ಜಿಲ್ಲಾಧಿಕಾರಿ ಅಭಿರಾಮ್​ ಜಿ.ಶಂಕರ್ ಹೇಳಿದ್ದಾರೆ. ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ ಅಂತಲೂ ತಿಳಿಸಿದ್ದಾರೆ.

No Pass Required to Necessary things: District Collector Abhiram G. Shankar
ಅಗತ್ಯ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ: ಜಿಲ್ಲಾಧಿಕಾರಿ ಅಭಿರಾಮ್ ಜಿ .ಶಂಕರ್
author img

By

Published : Mar 28, 2020, 2:11 PM IST

ಮೈಸೂರು: ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್​ ತಿಳಿಸಿದರು. ಕೊರೊನಾ ವೈರೆಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೇಸ್​ಬುಕ್ ಪೇಜ್​ನಲ್ಲಿ ಲೈವ್ ಸಂದೇಶ ನೀಡಿದ ಅವರು, ಸರ್ಕಾರಿ ಅಧಿಕಾರಿಗಳಿಗೆ, ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ಇನ್ನಿತರ ಅಗತ್ಯ ಸೇವೆಗಳನ್ನು ಒದಗಿಸುವ ಅಧಿಕಾರಿಗಳಿಗೆ ಪಾಸ್ ಅವಶ್ಯಕತೆಯಿಲ್ಲ ಎಂದರು.

ಅಗತ್ಯ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ: ಜಿಲ್ಲಾಧಿಕಾರಿ ಅಭಿರಾಮ್ ಜಿ .ಶಂಕರ್

ನಿತ್ಯ ಅಗತ್ಯ ವಸ್ತುಗಳನ್ನು ಸಾಗಿಸುವ ಸರಕು ವಾಹನಗಳಿನ್ನು ನಿರ್ಬಂಧಿಸಿಲ್ಲ. ಈ ಬಗ್ಗೆ ಜಿಲ್ಲೆಯ ಪೊಲೀಸ್ ಆಯುಕ್ತರ ಜೊತೆ ಮಾತನಾಡಿ, ರೈತರಿಗೆ ತೊಂದರೆ ಆಗದಂತೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಂತರ್ಜಾಲದ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ಅಂತರ್ಜಾಲವನ್ನು ನಿಷೇಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ನಗರ ಪ್ರದೇಶದ ಜೊತೆಗೆ ಗ್ರಾಮಾಂತರ ಪ್ರದೇಶದ ಜನತೆ ಬಗ್ಗೆಯೂ ಸಹ ಮುಂಜಾಗ್ರತೆ ಕ್ರಮವನ್ನು ಕೈಗೊಂಡಿದ್ದು, ಆಯಾ ಸ್ಥಳಿಯ ಅಧಿಕಾರಿ ಜವಾಬ್ದಾರಿ ವಹಿಸಲಾಗಿದೆ. ಅವರು ಜಿಲ್ಲಾಡಳಿತ ನಿರ್ದೇಶನದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

ಈವರೆಗೆ 494 ಮಂದಿ 14 ದಿನಗಳ ಹೋಮ್ ಐಸೋಲೇಶನ್ ಅನ್ನು ಮುಕ್ತಾಯಗೊಳಿಸಿದ್ದಾರೆ. ಒಟ್ಟು 66 ಜನರನ್ನು ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ 63 ಮಂದಿಗೆ ಯಾವುದೇ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಅದರಲ್ಲಿ 3 ಮಂದಿಗೆ ಕೊರೊನಾ ಸೋಂಕು ಪಾಸಿಟೀವ್ ಬಂದಿದೆ ಎಂದು ಮಾಹಿತಿ ನೀಡಿದರು. ಪ್ರಸ್ತುತ 2 ಸಾವಿರಕ್ಕೂ ಹೆಚ್ಚು ಮಂದಿ ಸ್ವಯಂ ಸೇವಕರಾಗಿ ಆಯ್ಕೆಯಾಗಿದ್ದಾರೆ.

ನಗರದ ಎಲ್ಲಾ ಹಾಸ್ಟೆಲ್ ಗಳನ್ನು ಜಿಲ್ಲಾಡಳಿತ ವಶಕ್ಕೆ ಪಡೆದು ಕ್ವಾರಂಟೈನ್ ಸೆಂಟರ್ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಇದನ್ನು ಕೇವಲ ಮುಂಜಾಗ್ರತವಾಗಿ ಚಿಂತಿಸಲಾಗಿದೆ ಹೊರತು ಕಡ್ಡಾಯವಾಗಿ ವಶಕ್ಕೆ ಪಡೆಯುವುದಾಗಿ ಹೇಳಿಲ್ಲ. ಅಗತ್ಯ ಇದ್ದರೆ ಮಾತ್ರ ಈ ಕ್ರಮವಹಿಸಲಾಗುವುದು. ಆದ್ದರಿಂದ ಯಾರೂ ಈ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.