ಮೈಸೂರು: ಕೊರೊನಾ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಮೈಸೂರಿನಲ್ಲಿ ಬ್ಯಾಂಕ್ಗಳಲ್ಲಿ ಗ್ರಾಹಕರ ಸುರಕ್ಷತೆಗೆ ಒತ್ತು ಕೊಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಮೈಸೂರಿನ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿರುವ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಇಲ್ಲ. ಅಲ್ಲದೆ ಬ್ಯಾಂಕುಗಳಲ್ಲಿಯೂ ಕೂಡ ಸ್ಯಾನಿಟೈಸರ್ ಇಡದೆ ಇರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ. ದುಡ್ಡು ವಿತ್ಡ್ರಾ ಮಾಡಿಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಜನರು ಸುರಕ್ಷತೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.
ಹುಣಸೂರು ಸೇರಿದಂತೆ ಮೈಸೂರಿನ 7 ತಾಲೂಕುಗಳಲ್ಲಿರುವ ಎಟಿಎಂಗಳಲ್ಲಿ ಸ್ಯಾನಿಟೈಸರ್ ಇಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.