ETV Bharat / state

ಯಾವುದೇ ಅಪರಾಧಿಗಳನ್ನು ರಕ್ಷಿಸುತ್ತಿಲ್ಲ: ಸಚಿವ ಸೋಮಶೇಖರ್ - ಸಾಮೂಹಿಕ ಅತ್ಯಾಚಾರ ಪ್ರಕರಣ,

ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ರಕ್ಷಿಸುತ್ತಿಲ್ಲ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಟೀಕೆ, ಆರೋಪಗಳ ಕುರಿತು ಅವರು ಈ ರೀತಿ ಪ್ರತಿಕ್ರಿಯಿಸಿದರು.

Minister Somashekar
ಸಚಿವ ಸೋಮಶೇಖರ್
author img

By

Published : Sep 8, 2021, 3:33 PM IST

ಮೈಸೂರು: ಯಾವುದೇ ಅಪರಾಧಿಗಳನ್ನು ರಕ್ಷಿಸುವ ಕೆಲಸವಾಗುತ್ತಿಲ್ಲ. ಇದರ ಬಗ್ಗೆ ಮಾತನಾಡುವವರು ಪರಿಜ್ಞಾನ ಇಟ್ಟುಕೊಳ್ಳಬೇಕು. ಆರೋಪ ಮಾಡಬೇಕು ಎಂಬ ಕಾರಣಕ್ಕೆ ಮಾಡಬಾರದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದರು.

ಪೊಲೀಸ್ ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸೋಮಶೇಖರ್

ಕೆ‌ಆರ್​​ ನಗರದಲ್ಲಿ ಪೊಲೀಸ್ ವಸತಿ ಗೃಹ-2020 ಫೇಸ್ 03 ಯೋಜನೆಯಡಿ ನೂತನವಾಗಿ ನಿರ್ಮಿಸಿರುವ 24 ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ದೀರ್ಘ ಸಮಯವನ್ನು ತೆಗೆದುಕೊಂಡಿಲ್ಲ. ಚುರುಕು ಕಾರ್ಯಾಚರಣೆ ನಡೆಸಿ ಒಂದು ವಾರದೊಳಗಾಗಿ ಆರೋಪಿಗಳ ಸುಳಿವನ್ನು ಪತ್ತೆ ಹಚ್ಚಿ ತಮಿಳುನಾಡಿಗೆ ಹೋಗಿ ಬಂಧಿಸಿದ್ದಾರೆ. ಯಾವುದೇ ಅಪರಾಧಿಗಳನ್ನು ರಕ್ಷಿಸುವ ಕೆಲಸವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

Minister Somashekhar ಇnaugurated police quarters

ಕರ್ನಾಟಕದ ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡುವುದರ ಜೊತೆಗೆ ಯಾವುದೇ ಸಂದರ್ಭ ಬಂದರೂ ಶೀಘ್ರವಾಗಿ ಅಪರಾಧಿಗಳ ಜಾಡು ಹಿಡಿದು ಹೆಡೆಮುರಿ ಕಟ್ಟುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತದಲ್ಲೇ ಕರ್ನಾಟಕದ ಪೊಲೀಸರ ಕಾರ್ಯ ವೈಖರಿ ಹೆಸರುವಾಸಿಯಾಗಿದೆ. ಇವರು ಕಾರ್ಯ ನಿರ್ವಹಿಸುತ್ತಿರುವುದರಿಂದಲೇ ಜನರು ನಮ್ಮದಿಯಿಂದ ಓಡಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಕಾರ್ಯ ನಿರ್ಹಹಿಸುವ ಪೊಲೀಸರಿಗೆ ಮನೆಯ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಚಿವ ಸೋಮಶೇಖರ್​ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ. ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಪುರಸಭೆ ಅಧ್ಯಕ್ಷ ಸುಬ್ರಹ್ಮಣ್ಯ, ಕೆ.ಎಲ್. ಜಗದೀಶ್ ಸೇರಿದಂತೆ ಇತರರು ಹಾಜರಿದ್ದರು.

ಓದಿ: ಸೆ.13ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ: 18 ಬಿಲ್​ಗಳ ಕುರಿತು ಸ್ಪೀಕರ್ ಕಾಗೇರಿ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.