ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಮೈಸೂರು ವಿಶ್ವಿವಿದ್ಯಾಲಯದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿನಿಯಲ್ಲಿ ಕೋವಿಡ್ ರೂಪಾಂತರಿ ಸೋಂಕು ದೃಢಪಟ್ಟಿದೆ. ಡಿಸೆಂಬರ್ 20 ರಂದು ಈಕೆ ತಾಂಜೇನಿಯಾ ಮೈಸೂರಿಗೆ ಬಂದಿದ್ದಳು ಎಂದು ತಿಳಿದುಬಂದಿದೆ.
ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆ ಆಗಿದೆ. ಜಿಲ್ಲಾಡಳಿತ ಆಕೆಯ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಅಲ್ಲದೇ ಅವರನ್ನು ಪ್ರತ್ಯೇಕವಾಗಿರಿಸಿ, ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.