ಮೈಸೂರು: ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಕ್ಕಣೆಯಿಂದ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಲಾಗಿರುವ ಘಟನೆ ನಂಜನಗೂಡು ತಾಲೂಕಿನ ಬದನವಾಳು - ದೇವನೂರು ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿ ಬದನವಾಳು - ದೇವನೂರು ಗ್ರಾಮಗಳ ರಸ್ತೆಯಲ್ಲಿ ಹೋಗುತ್ತಿದ್ದಾಗ, ರಸ್ತೆಯಲ್ಲಿ ಹಾಕಿದ್ದ ಒಕ್ಕಣೆಯಿಂದ, ಕಾರಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ತಕ್ಷಣ ಕಾರಿನಲ್ಲಿದ್ದವರು ಕೆಳಗಿಳಿದಿದ್ದಾರೆ.
ಕಾರಿನಿಂದ ಹೊರ ಬಂದು ಬೆಂಕಿ ನಂದಿಸಲು ಯತ್ನಿಸಿದರೂ, ಸಂಪೂರ್ಣ ಕಾರು ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದವರು ಬನ್ನೂರು ಮೂಲದವರು ಎನ್ನಲಾಗಿದೆ. ಈ ಸಂಬಂಧ ಕಾರು ಚಾಲಕ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಮೈಸೂರು: ಮಗು ಎದೆ ಹಾಲು ಕುಡಿಯುತ್ತಿಲ್ಲವೆಂದು ಆತ್ಮಹತ್ಯೆಗೆ ಶರಣಾದ ತಾಯಿ!