ಮೈಸೂರು: ತಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಬೆಂಗಳೂರಿನಿಂದ ಸ್ವಗ್ರಾಮ ಕುರುಬೂರು ಗ್ರಾಮಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಸಂಬಂಧ ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸೋಂಕಿತ ವ್ಯಕ್ತಿಯನ್ನು ಕೋವಿಡ್-19 ಆಸ್ಪತ್ರೆಗೆ ಆರೋಗ್ಯ ಇಲಾಖೆಯವರು ಕರೆದೊಯ್ದಿದ್ದು, ಗ್ರಾಮವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.