ETV Bharat / state

ಮೈಸೂರಿನಲ್ಲಿ ಒಂದು Delta + ಪ್ರಕರಣ ಧೃಡ: ಡಿಎಚ್​ಒ ಹೇಳಿದ್ದಿಷ್ಟು! - ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್

ಮೈಸೂರಿನಲ್ಲಿ ಒಟ್ಟು 40 ಮಾದರಿಗಳನ್ನು ಮೇ ತಿಂಗಳಿನಲ್ಲಿ ಬೆಂಗಳೂರಿನ ನಿಮಾನ್ಸ್ ಲ್ಯಾಬ್​ಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್​ ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಈಗ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದಾನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ಈಟಿವಿ ಭಾರತ ನಡೆಸಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ‌.

mysore
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್
author img

By

Published : Jun 23, 2021, 3:01 PM IST

ಮೈಸೂರು: ಕರ್ನಾಟಕದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಮೈಸೂರಿನಲ್ಲಿ ಸಹ ಪತ್ತೆಯಾಗಿದ್ದು, ಸೋಂಕಿತ ಸಂಪೂರ್ಣವಾಗಿ ಗುಣಮುಖನಾಗಿದ್ದಾನೆ. ಆದರೆ, ಜನರು ಈ ಬಗ್ಗೆ ಭಯ ಭೀತರಾಗಬೇಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ಈಟಿವಿ ಭಾರತ ನಡೆಸಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ‌.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್

ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಮೈಸೂರಿನಲ್ಲಿ ಒಟ್ಟು 40 ಸ್ಯಾಂಪಲ್​ಗಳನ್ನು ಮೇ ತಿಂಗಳಿನಲ್ಲಿ ಬೆಂಗಳೂರಿನ ನಿಮಾನ್ಸ್ ಲ್ಯಾಬ್​ಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್​ ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಈಗ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದಾನೆ. ಈ ವೈರಸ್ ಗುಣಲಕ್ಷಣಗಳು ಕೋವಿಡ್ ರೀತಿಯಲ್ಲೆ ಇರುತ್ತದೆ. ಆದರೆ, ಎಚ್ಚರಿಕೆಯಿಂದ ಇರಬೇಕು. ಇದರಿಂದ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದರು.

ಪ್ರತಿ ತಿಂಗಳು ಜಿಲ್ಲೆಯಿಂದ 40 ಸ್ಯಾಪ್ ಕಳುಹಿಸಲಾಗುತ್ತದೆ. ರ‍್ಯಾಂಡಮ್ ಆಗಿ ಕಳುಹಿಸಿದ 40 ಸ್ಯಾಂಪಲ್‌ನಲ್ಲಿ ಒಂದು ಡೆಲ್ಟಾ ಫ್ಲಸ್ ಸೋಂಕು ಇರೋದು ಗೊತ್ತಾಗಿದೆ. ಇನ್ನು ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹಾಗೂ ಮರಣ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.