ಮೈಸೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಬಳಿ ನಡೆದಿದೆ.
ಹುಂಡಿ ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ದಿನೇಶ್ (23) ಸಾವನ್ನಪ್ಪಿದ್ದಾರೆ. ಇವರು ನಂಜನಗೂಡಿನ ಹದಿನಾರು ಗ್ರಾಮದ ನಿವಾಸಿಯಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಸ್ಥಳಕ್ಕೆ ಟಿ.ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಘಟನೆ ಕುರಿತು ವಿವರ ಪಡೆಯುತ್ತಿದ್ದಾರೆ.