ETV Bharat / state

ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ - ಮೈಸೂರಿನಲ್ಲಿ ಕೊರೊನಾಗೆ ವೃದ್ಧೆ ಸಾವು

ಮಹಾಮಾರಿ ಕೊರೊನಾದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

one-more-corona-patient-dead-in-mysuru
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ
author img

By

Published : Jul 2, 2020, 10:07 AM IST

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾಗೆ ನಾಲ್ಕನೇ ಬಲಿಯಾಗಿದ್ದು, ಈ ಮೂಲಕ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ.

ತಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮದ 60 ವರ್ಷದ ಮಹಿಳೆ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಮೃತರ ಅಂತ್ಯಸಂಸ್ಕಾರ ಇಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.