ಮೈಸೂರು: ಅಲ್ ಖೈದಾ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಪೊಲೀಸ್ ತನಿಖೆಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ನೆಲ ಮತ್ತು ಕಾನೂನಿನ ವಿರುದ್ಧವಾಗಿ ನಿರಂತರ ಷಡ್ಯಂತರ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಯಿ ತಿಳಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ರಾಜ್ಯದ ಬೇಡಿಕೆಗಳಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಕೇಂದ್ರದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮಾತುಕತೆ ನಡೆದಿದೆ. ಮುಂದಿನ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿರ್ಧಾರವಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿಕೆಗೆ ಅಲ್ ಖೈದಾ ಮೆಚ್ಚುಗೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅಲ್ ಖೈದಾ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ವೇಳೆ, ಅಲ್ ಖೈದಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯನವರಿಗೆ ಏಕೆ ಗಲಿಬಿಲಿ? ಎಂದು ಸಿಎಂ ಬಸವರಾಜ ಬೊಮ್ಮಯಿ ಪ್ರಶ್ನೆ ಮಾಡಿದರು.
ಇದನ್ನೂ ಓದಿ: ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೆಹಲಿ ಯಾತ್ರೆ ಫಲಪ್ರದ: ಸಿಎಂ ಬೊಮ್ಮಾಯಿ