ETV Bharat / state

ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲಿನ ಹಲ್ಲೆ ತಡೆಯಲು ಇಂದು ಸುಗ್ರೀವಾಜ್ಞೆ ಜಾರಿ: ಎಸ್.ಟಿ. ಸೋಮಶೇಖರ್ - mysore latest news

ಕೊರೊನಾ ಚಿಕಿತ್ಸೆಗೆಂದು ತೆರಳುವ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲಾಗುತ್ತಿರುವ ಹಲ್ಲೆ ತಡೆಯಲು ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇರಳ ಮತ್ತು ಉತ್ತರ ಪ್ರದೇಶದ ಕಾನೂನಿನಂತೆ, ಹೆಚ್ಚಿನ ಕಠಿಣ ಕ್ರಮಗಳಿದ್ದರೆ ಅದನ್ನು ಸಹ ಸೇರಿಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

order to stop the harassment on the health department
ಆರೋಗ್ಯ ಇಲಾಖೆಯವರ ಮೇಲಾಗುತ್ತಿರುವ ಹಲ್ಲೆ ತಡೆಯಲು ಸುಗ್ರೀವಾಜ್ಞೆ ಹೊರಡಿಸಲಾಗುವುದು: ಎಸ್.ಟಿ.ಸೋಮಶೇಖರ್
author img

By

Published : Apr 21, 2020, 3:28 PM IST

ಮೈಸೂರು: ರಾಜ್ಯದಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗೆಂದು ತೆರಳಿದಾಗ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಇಂದೇ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಸಚಿವ ಎಸ್.ಟಿ.ಸೋಮಶೇಖರ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಮತ್ತು ಉತ್ತರ ಪ್ರದೇಶದ ಕಾನೂನಿನಂತೆ, ಹೆಚ್ಚಿನ ಕಠಿಣ ಕ್ರಮಗಳಿದ್ದರೆ ಅದನ್ನು ಸಹ ಸೇರಿಸಿ ಸುಗ್ರೀವಾಜ್ಞೆಯೊಂದಿಗೆ ಬಿಗಿ ಕಾನೂನಿನ ಆದೇಶ ಹೊರಬೀಳಲಿದೆ. ಬಳಿಕ ಹಲ್ಲೆಕೋರರನ್ನು ಬಂಧಿಸಿ ಅವರನ್ನು ಜೈಲಿಗಟ್ಟಲಾಗುವುದು ಎಂದು ಎಚ್ಚರಿಕೆ ರವಾನಿಸಿದರು.

ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದ್ದು, ಇನ್ನು ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸಬಾರದೆಂದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಮೈಸೂರಿನಲ್ಲಿ ಈವರೆಗೆ 1561 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ. ಇನ್ನೂ ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.