ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನೋರ್ವ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ನಾಲ್ವರ ಬಾಳಿಗೆ ಬೆಳಕಾಗಿದ್ದಾನೆ.
ಮದನ್ ರಾಜ್ (22) ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ. ಪಿರಿಯಾಪಟ್ಟಣದ ಕೊಪ್ಪ-ಅವರತಿ ರಸ್ತೆಯಲ್ಲಿ ಫೆ. 9ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮದನ್ ರಾಜ್ನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮದನ್ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.
ಹೀಗಾಗಿ ನಗರದ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಹೃದಯವನ್ನು ಕೊಂಡೊಯ್ಯಲಾಯಿತು.