ಮೈಸೂರು: ಚಾಲಕನ ಸಮಯಪ್ರಜ್ಞೆಯಿಂದ ಚಾಮುಂಡಿ ಬೆಟ್ಟದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಬೆಟ್ಟಕ್ಕೆ ಹೋಗುತ್ತಿದ್ದ ಬಸ್ ಬ್ರೇಕ್ನ ಏರ್ ಪೈಪ್ ಕಟ್ಟಾಗಿ ಕೆಳಕ್ಕೆ ಉರುಳುತ್ತಿದ್ದ ವೇಳೆ ಚಾಲಕ ತಡೆಗೋಡೆಗೆ ಗುದ್ದಿದ್ದಾನೆ. ಇದರಿಂದ ಬಸ್ ನಿಂತಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತ ಪರಿಣಾಮ ಸಾರಿಗೆ ಬಸ್ ಹಾಗೂ ಬೇರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಕರೆ ಮಾಡಿ, ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.