ಮೈಸೂರು: ಡಿಕೆಶಿ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಮಠಾಧೀಶರು ಭಾಗವಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು ಮಠಾಧೀಶರು ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಡಿ.ಕೆ.ಶಿವಕುಮಾರ್ ನಿರಪರಾಧಿ ಎಂದು ತೋರಿದೆ, ಅದಕ್ಕೆ ಮಠಾಧೀಶರು ಪ್ರತಿಭಟನೆ ಮೂಲಕ ಬೆಂಬಲಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ರು.