ಮೈಸೂರು: ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಬಡ ಜನರು ಪಾಲಿಕೆಯ ಸದಸ್ಯನ ವಿರುದ್ಧ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗಾಂಧಿ ನಗರದಲ್ಲಿ ನಡೆದಿದೆ.
ಮಹಾನಗರ ಪಾಲಿಕೆಯ ವಾರ್ಡ್ 27 ರ ಗಾಂಧಿನಗರ ವ್ಯಾಪ್ತಿಯಲ್ಲಿ ಬಡ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದು, ಲಾಕ್ಡೌನ್ನಿಂದ ಒಂದು ಹೊತ್ತಿನ ಊಟಕ್ಕೂ ಸಮಸ್ಯೆಯಾಗಿದೆ. ಆದರೆ ಈ ವ್ಯಾಪ್ತಿಯ ಪಾಲಿಕೆ ಸದಸ್ಯ ನಮಗೆ ಯಾವುದೇ ಸಹಾಯ ಮಾಡಿಲ್ಲ ಎಂದು ಜನರು ದಿಢೀರ್ ರಸ್ತೆಗೆ ಇಳಿದಿದ್ದರು. ಅಲ್ಲದೆ, ಸಾಮಾಜಿಕ ಅಂತರವನ್ನು ಮರೆತು ಗುಂಪುಗುಂಪಾಗಿ ಪಾಲಿಕೆ ಸದಸ್ಯನ ವಿರುದ್ಧ ಪ್ರತಿಭಟನೆ ನಡೆಸಿದರು.
ನಮ್ಮ ಪಕ್ಕದ ವಾರ್ಡ್ಗೆ ಹಾಲು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಿದ್ದಾರೆ. ಆದರೆ ಬಡವರು ಇರುವ ನಮ್ಮ ವಾರ್ಡ್ಗೆ ಏನು ಕೊಟ್ಟಿಲ್ಲ ಎಂದು ಪಾಲಿಕೆ ಸದಸ್ಯನ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.