ಮೈಸೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಫೋನ್ ಮಾಡಿ ಹೇಳಿ ಕೆರೆಗೆ ಹಾರಿದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ಭುಗತಗಳ್ಳಿ ನಿವಾಸಿ ಬಸವಣ್ಣ(28) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಂಗಳವಾರ ಸಂಜೆ 5 ಗಂಟೆಗೆ ತನ್ನ ಗೆಳೆಯರಿಗೆ ಕರೆ ಮಾಡಿ, ಜೀವನದಲ್ಲಿ ನನಗೆ ತುಂಬಾ ಬೇಸರವಾಗಿದೆ. ನಾನು ಬದುಕುವುದಿಲ್ಲ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದನಂತೆ.
![person-commits-suicide-after-informing-friends-through-phone-call](https://etvbharatimages.akamaized.net/etvbharat/prod-images/6367557_medjpg.jpg)
ಆದರೆ, ಈತ ತಮಾಷೆ ಮಾಡುತ್ತಿದ್ದಾನೆ ಎಂದು ಭಾವಿಸಿದ್ದ ಸ್ನೇಹಿತರಿಗೆ, ಬಸವಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಭಾರೀ ಆಘಾತ ನೀಡಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.