ETV Bharat / state

ಮೈಸೂರು: ಸಿಎಂ ಖಾಸಗಿ ನಿವಾಸದ ಮೇಲೆ ಕಲ್ಲೆಸೆದ ವ್ಯಕ್ತಿ ಸೆರೆ

ಮೈಸೂರಿನಲ್ಲಿನ ಸಿಎಂ ಸಿದ್ದರಾಮಯ್ಯನವರ ಖಾಸಗಿ ನಿವಾಸದ ಮೇಲೆ ಕಲ್ಲೆಸೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ಎಸೆದ ವ್ಯಕ್ತಿ ಬಂಧನ
ಕಲ್ಲು ಎಸೆದ ವ್ಯಕ್ತಿ ಬಂಧನ
author img

By ETV Bharat Karnataka Team

Published : Oct 10, 2023, 9:24 PM IST

ಮೈಸೂರು : ನಗರದ ಟಿ.ಕೆ.ಲೇಔಟ್​ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಖಾಸಗಿ ನಿವಾಸದ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದಿದ್ದಾನೆ. ಆರೋಪಿಯನ್ನು ಸರಸ್ವತಿಪುರಂ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮನೆಯ ಕಿಟಕಿ ಗಾಜುಗಳು ಹಾನಿಗೀಡಾಗಿವೆ. ನಿವಾಸದ ಭದ್ರತೆಗಿದ್ದ ಪೊಲೀಸರು ಆರೋಪಿ ಸತ್ಯಮೂರ್ತಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಈತ ನಗರದ ಹೂಟಗಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ.

ಇವಿಎಂ ಯಂತ್ರ ಒಡೆದು ಹಾಕಿದ್ದ: ಇದೇ ಆರೋಪಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೂಟಗಳ್ಳಿ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನ ಮಾಡಲು ಆಗಮಿಸಿದ್ದಾಗ ಇವಿಎಂ ಯಂತ್ರ ಒಡೆದು ಹಾಕಿದ್ದ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ವಿರುದ್ಧ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸಿದ್ದರಾಮಯ್ಯ ಕಳೆದ ಭಾನುವಾರ ಮೈಸೂರಿನ ಮನೆಯಲ್ಲಿದ್ದಾಗ ಆರೋಪಿ ಸತ್ಯಮೂರ್ತಿ, ಟಿ.ಕೆ.ಲೇಔಟ್​ನ ಸಿಎಂ ಖಾಸಗಿ ಮನೆ ಬಳಿಗೆ ಬಂದು ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾನೆ.

ಇದೀಗ ಜಖಂಗೊಂಡ ಸಿಎಂ ಮನೆ ಕಿಟಕಿ ಗಾಜುಗಳನ್ನು ತಕ್ಷಣವೇ ದುರಸ್ತಿ ಮಾಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ರಾಗಿಗುಡ್ಡಕ್ಕೆ ಭೇಟಿ ನೀಡಿದ ಕಟೀಲ್​ ನೇತೃತ್ವದ ಸತ್ಯ ಶೋಧನಾ ಸಮಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.