ETV Bharat / state

ಹುಲಿ ಯೋಜನೆಯ ಸುವರ್ಣ ಮಹೋತ್ಸವ : ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ - Golden Jubilee of Tiger Project

ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು, ರ‍್ಯಾಡಿಶನ್ ಬ್ಯೂ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಿದ್ದಾರೆ.

pm-narendra-modi-arrived-in-mysore
ಹುಲಿ ಯೋಜನೆಯ ಸುವರ್ಣ ಮಹೋತ್ಸವ : ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ
author img

By

Published : Apr 8, 2023, 10:38 PM IST

ಮೈಸೂರು: ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಗೆ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌದರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಪೊಲೀಸ್ ಆಯುಕ್ತರಾದ ರಮೇಶ್ ಹಾಗೂ ಜನಪ್ರತಿನಿಧಿಗಳು ಇತರರು ಸ್ವಾಗತ ಕೋರಿದರು.

ಬಳಿಕ ಪ್ರಧಾನಿ ನಂಜನಗೂಡು ರಸ್ತೆ ಮಾರ್ಗದಲ್ಲಿ ರ‍್ಯಾಡಿಶನ್ ಬ್ಯೂ ಹೋಟೆಲ್ ತಲುಪಿ ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ವಾಸ್ತವ್ಯ ಹೂಡಿರುವ ಹೋಟೆಲ್ ಸೇರಿದಂತೆ ಸಂಚರಿಸುವ ಮಾರ್ಗ ಮತ್ತು ಭಾಗವಹಿಸುವ ಕಾರ್ಯಕ್ರಮದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸ್ ಸರ್ಪಗಾವಲು ಇರಿಸಲಾಗಿದೆ. ಅರೆಸೇನಾ ಪಡೆಯೊಂದಿಗೆ ನಗರ ಸಶಸ್ತ್ರ ಮೀಸಲು ಪಡೆ, ಕಮಾಂಡೋ ಪಡೆಯೊಂದಿಗೆ ಸಿವಿಲ್ ಮತ್ತು ಸಂಚಾರ ಪೊಲೀಸರು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಆರಕ್ಷಕರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಭಾನುವಾರ ಬೆಳಗ್ಗೆ 6.20ಕ್ಕೆ ಹೋಟಲ್‌ನಿಂದ ನಂಜನಗೂಡು ಮಾರ್ಗವಾಗಿ ಮಂಡಕಳ್ಳಿ ಏರ್‌ಪೋರ್ಟ್ ತಲುಪಲಿರುವ ಪ್ರಧಾನಿ, ಅಲ್ಲಿಂದ ಬೆಳಗ್ಗೆ 7ಕ್ಕೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ತಾತ್ಕಲಿಕ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸುವುದರೊಂದಿಗೆ ತಮಿಳುನಾಡಿನ ಮಧುಮಲೈ ಹುಲಿ ಮೀಸಲು ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಮೊದಲ ಬಾರಿಗೆ ಪಿಎಂ ವನ್ಯಜೀವಿ ಸಫಾರಿ: ಪ್ರಧಾನಿ ಮೋದಿ ಬಂಡೀಪುರವನ್ನೇ ಆಯ್ಕೆ ಮಾಡಿಕೊಂಡಿದ್ದು ಏಕೆ..?

ನಂತರ ಬೆಳಗ್ಗೆ 9.45ಕ್ಕೆ ಅಲ್ಲಿನ ತೆಪ್ಪಕಾಡು ಹೆಲಿಪ್ಯಾಡ್‌ನಿಂದ ಹೊರಟು ಬೆಳಗ್ಗೆ 10.20ಕ್ಕೆ ಮೈಸೂರು ವಿವಿ ಎದುರಿನ ಒವೆಲ್ ಮೈದಾನದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಹುಣಸೂರು ರಸ್ತೆಯಲ್ಲಿನ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮತ್ತೆ ಅಲ್ಲಿಂದ ರಸ್ತೆ ಮಾರ್ಗವಾಗಿ ಒವೆಲ್ ಮೈದಾನಕ್ಕೆ ಹಿಂದಿರುಗುವ ಪ್ರಧಾನಿ, ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಹಿಂದಿರುಗಲಿದ್ದಾರೆ.

ತೀವ್ರ ತಪಾಸಣೆ: ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಿರುವ ರ್ಯಾಡಿಸನ್ ಹೋಟೆಲ್‌ನಲ್ಲಿ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಯೊಂದಿಗೆ ತೀವ್ರ ತಪಾಸಣೆ ನಡೆಸಿದ್ದಾರೆ. ಕೆಲವೆಡೆ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾರ್ಯಕ್ರಮ ನಡೆಯುವ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿಯೂ ಸಹ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದರೊಂದಿಗೆ ಪ್ರಧಾನಿಯವರು ಹೆಲಿಕಾಪ್ಟರ್‌ನಲ್ಲಿ ಬಂದಿಳಿಯುವ ಒವೆಲ್ ಮೈದಾನದ ಸುತ್ತಮುತ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ನಾಳೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಈ‌ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.