ಮೈಸೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುವ ಸ್ಥಳಕ್ಕಾಗಮಿಸಿದ ಡಿಸಿಪಿ ಡಾ. ಪ್ರಕಾಶ್ ಗೌಡ ಪರಿಶೀಲನೆ ನಡೆಸಿದರು.
ಡಿಸಿಪಿ ಡಾ. ಪ್ರಕಾಶ್ ಗೌಡ ಅವರು ಚುನಾವಣೆಯ ಮತ ಎಣಿಕೆ ನಡೆಯುವ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದರು. ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಮತ್ತು ಹಂತ ಹಂತವಾಗಿ ಒಂದೊಂದು ಪಂಚಾಯಿತಿ ನಂತರ ಮತ್ತೊಂದು ಪಂಚಾಯಿತಿಯ ಮತ ಎಣಿಕೆ ಕಾರ್ಯವನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಚಾಮರಾಜನಗರ: ಮತ ಎಣಿಕೆ ಕೇಂದ್ರದಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ
ಅಭ್ಯರ್ಥಿ ಅಥವಾ ಅವರ ಏಜೆಂಟ್ ಭಾಗವಹಿಸಿದ್ದರೆ ಅವರನ್ನು ಮತ್ತು ಯಾರು ಪಾಸ್ ತೋರಿಸುತ್ತಾರೋ ಅವರನ್ನು ಮಾತ್ರ ಒಳಗೆ ಬಿಡಲಾಗುತ್ತದೆ. ಸಂಬಂಧ ಪಟ್ಟ ಪಂಚಾಯಿತಿಯ ಮತ ಎಣಿಕೆ ಮುಗಿದ ಮೇಲೆ ಅವರನ್ನು ಹೊರಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಪಿ ಡಾ. ಪ್ರಕಾಶ್ ಗೌಡ ಮಾಹಿತಿ ನೀಡಿದರು.