ETV Bharat / state

ದಸರಾ ಸಂಭ್ರಮದಲ್ಲಿರುವ ಮೈಸೂರಿನಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ - ಎನ್​ಐಎ ಅಧಿಕಾರಿಗಳು ದಾಳಿ

ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ, ವಿಚಾರಣೆ ವೇಳೆ ದೊರೆತ ಮಾಹಿತಿ ಆಧಾರದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

Mysore
ಮೈಸೂರು
author img

By

Published : Sep 27, 2022, 12:26 PM IST

ಮೈಸೂರು: ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರಬಿದ್ದಿವೆ. ಎನ್​ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಮತ್ತೊಬ್ಬ ಮೈಸೂರು ಜಿಲ್ಲಾ ಪಿಎಫ್ಐ ಮಾಜಿ ಕಾರ್ಯದರ್ಶಿ ಜಾಫರ್ ಷರೀಫ್ ಹಾಗೂ ಪಿಎಫ್ಐ ಸಕ್ರಿಯ ಕಾರ್ಯಕರ್ತ ಫೈರೋಜುಲ್ಲಾ ಷರೀಫ್ ಅವರನ್ನು ಮನೆಗಳಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಪಿಎಫ್​ಐ ಮುಖಂಡರ ಮನೆ ಮೇಲೆ ಪೊಲೀಸ್ ​ದಾಳಿ; ಇಬ್ಬರು ಮಾಜಿ ಮುಖಂಡರು ವಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.