ETV Bharat / state

ಖಾಕಿಗೆ ಬೈ​ ರಾಜಕೀಯಕ್ಕೆ ಜೈ: ರೆಡ್ಡಿ ಪಕ್ಷದಿಂದ ಚುನಾವಣಾ ಅಖಾಡಕ್ಕಿಳಿದ ಪೊಲೀಸ್‌ ಹೆಡ್​ ಕಾನ್ಸ್​ಟೇಬಲ್​

ನಂಜನಗೂಡು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಚಪ್ಪ ಎಂಬುವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.

police constable
ರಾಚಪ್ಪ
author img

By

Published : Mar 30, 2023, 1:22 PM IST

ನಂಜನಗೂಡು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಚಪ್ಪ

ಮೈಸೂರು : ಸರ್ಕಾರಿ ಕೆಲಸ ಸಿಕ್ಕರೆ ಸಾಕಪ್ಪಾ ಅನ್ನೋ ಈ ಕಾಲದಲ್ಲಿ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯದಲ್ಲಿ ಭವಿಷ್ಯ ಹುಡುಕಲು ಮುಂದಾಗಿದ್ದಾರೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಚಪ್ಪ ಮೊದಲ ಬಾರಿಗೆ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ.

ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಸಾರಥ್ಯದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧೆಗೆ ಇಳಿಯುತ್ತಿದ್ದಾರೆ. ಈಗಾಗಲೇ ಪಕ್ಷದಿಂದ ಅಧಿಕೃತವಾಗಿ ಟಿಕೆಟ್ ಗಿಟ್ಟಿಸಿರುವ ರಾಚಪ್ಪ, ಮತದಾರರನ್ನು ಸೆಳೆಯಲು ಕ್ಷೇತ್ರದಲ್ಲಿ ಚುರುಕಾಗಿ ಓಡಾಡುತ್ತಿದ್ದಾರೆ.

ಇದನ್ನೂ ಓದಿ : "ಅಭಿವೃದ್ಧಿ ಕೆಲಸ ಮಾಡಿ ತೋರಿಸಿ": ಚುನಾವಣೆಗಾಗಿ ಹಂಚಿದ ಸೀರೆಗಳಿಗೆ ಬೆಂಕಿ ಹಚ್ಚಿ ಜನರ ಆಕ್ರೋಶ

ಸುಮಾರು 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ರಾಚಪ್ಪ ಮೂಲತಃ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದವರು. ಮೈಸೂರು, ಟಿ.ನರಸೀಪುರ, ಹೆಚ್.ಡಿ.ಕೋಟೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕೆಲಸಕ್ಕೆ ರಾಜಿನಾಮೆ ನೀಡಿದ್ದು, ಇನ್ನೂ 8 ವರ್ಷಗಳ ಕಾಲ ವರ್ಕ್​ ಮಾಡುವ ಅವಕಾಶವಿದ್ದರೂ ಜನಸೇವೆ ಮಾಡುವ ಮನಸ್ಸು ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 8,67,909 ಮತದಾರರು

ನಂಜನಗೂಡು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಹೊರಗಿನವರೇ ಹೆಚ್ಚು ಆಡಳಿತ ನಡೆಸಿದ್ದಾರೆ. ನಿಮ್ಮೂರಿನ ಮಗನಿಗೆ ಒಂದು ಅವಕಾಶ ಕಲ್ಪಿಸಿ ಕೊಟ್ಟು ಅಭಿವೃದ್ಧಿಗೆ ಸಹಕರಿಸಿ. ಜನಾರ್ದನ ರೆಡ್ಡಿ ಅವರ ಮಾತಿಗೆ ಗೌರವ ನೀಡಿ ನಾನು ರಾಜಕೀಯಕ್ಕೆ ಕಾಲಿಟ್ಟಿದ್ದೇನೆ" ಎಂದರು.

ಇದನ್ನೂ ಓದಿ : ಅಬಕಾರಿ ಇಲಾಖೆಯ ಭರ್ಜರಿ ಕಾರ್ಯಾಚರಣೆ ಬರೋಬ್ಬರಿ 54 ಲಕ್ಷ ಮೌಲ್ಯದ ಮದ್ಯ ವಶ

ರಾಜಕೀಯ ಅನುಭವ ಇಲ್ಲದಿದ್ದರೂ ಕೂಡ ರಾಚಪ್ಪನವರು ನಂಜನಗೂಡಿನ ಘಟಾನುಘಟಿಗಳ ಮುಂದೆ ತೊಡೆ ತಟ್ಟಿ ಆಟ ಆರಂಭಿಸಿದ್ದಾರೆ. ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯೂ ಆಗಿದ್ದ ಇವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾಗಿ ವಿಧಾನಸಭೆಗೆ ಆಯ್ಕೆಯಾಗಲು ಬಯಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅನೂರ್ಜಿತ

ಕರ್ನಾಟಕ ವಿಧಾನಸಭಾ ಚುನಾವಣೆ 2023: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್‌ 13 ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗುತ್ತದೆ. 20ನೇ ಏಪ್ರಿಲ್ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 21 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮತ್ತು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನ ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಜಕೀಯದಲ್ಲಿ ಮಹಿಳೆಯರ ಪಾಲೇನು? ಇಲ್ಲಿದೆ ಅಂಕಿಅಂಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.