ETV Bharat / state

ದಸರಾ ಮಹೋತ್ಸವ ಹಿನ್ನೆಲೆ: ಫುಲ್​ ಅಲರ್ಟ್​ ಆದ ಖಾಕಿ ಪಡೆ - ಮೈಸೂರಲ್ಲಿ ಪೊಲೀಸ್​ ಇಲಾಖೆಯಿಂದ ಎಚ್ಚರಿಕೆ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್​ ಇಲಾಖೆ ಅಲರ್ಟ್ ಆಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ.

Police department full alert in mysore
ಫುಲ್​ ಅಲರ್ಟ್​ ಆದ ಖಾಕಿ ಪಡೆ
author img

By

Published : Sep 30, 2021, 12:23 PM IST

Updated : Sep 30, 2021, 1:38 PM IST

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಗರದಲ್ಲಿ ಖಾಕಿ ಪಡೆ ಕಾರ್ಯಪ್ರವೃತವಾಗಿದೆ. ದಸರಾ ಹಿನ್ನೆಲೆಯಲ್ಲಿ ಅಲರ್ಟ್​​ ಆಗಿರುವ ಪೊಲೀಸ್​, ರಾತ್ರಿ 8 ಗಂಟೆ ನಂತರ ಅನಗತ್ಯವಾಗಿ ಓಡಾಡುವವರಿಗೆ ಬಿಸಿ ಮುಟ್ಟಿಸಲು ಖಾಕಿ ಪಡೆ ಸಜ್ಜಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿದೆ.

ಮೈಸೂರಲ್ಲಿ ಫುಲ್​ ಅಲರ್ಟ್​ ಆದ ಪೊಲೀಸ್​

ಈ ಸಂಬಂಧ ನಗರದಲ್ಲಿ ಡಿಸಿಪಿ ಗೀತಾ ಪ್ರಸನ್ನ ಅವರು ಕಾರ್ಯಾಚರಣೆ ನಡೆಸಿದ್ದು, ಎನ್​​ಆರ್ ವಿಭಾಗದ ಪೊಲೀಸ್ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಗಮನ ಹರಿಸುವುದು, ರೌಡಿಗಳು ಹಾಗೂ ಪುಂಡರಿಗೆ ವಾರ್ನಿಂಗ್ ನೀಡುವುದು ಸೇರಿದಂತೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಖಡಕ್​​​ ಸೂಚನೆ ನೀಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಶೀಘ್ರದಲ್ಲೇ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಲಿರುವ ಸಿಎಂ

Last Updated : Sep 30, 2021, 1:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.