ಮೈಸೂರು: ಅನುಮಾನಾಸ್ಪದ ವ್ಯಕ್ತಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹೊರವಲಯದ ರಿಂಗ್ ರಸ್ತೆಯ ಅಪಾರ್ಟ್ಮೆಂಟ್ ಬಳಿ ಈ ವ್ಯಕ್ತಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನಂತೆ. ಆಗ ಪ್ರಶ್ನಿಸಿದಾಗ ಪೊಲೀಸರಿಗೇ ಗನ್ ತೋರಿಸಿ ಕೊಲೆ ಮಾಡಲು ಯತ್ನಿಸಿದ್ದ ಎನ್ನಲಾಗ್ತಿದೆ. ಇದಕ್ಕೆ ಪ್ರತಿಯಾಗಿ ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದರಿಂದ ಆ ವ್ಯಕ್ತಿ ಕುಸಿದು ಬಿದ್ದಿದ್ದ. ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತದೇಹವನ್ನು ಕೆ.ಆರ್. ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತನು ಮುಂಬೈ ಮೂಲದವನು ಎಂದು ಗುರುತಿಸಲಾಗಿದೆ. ಈತ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದ ಎನ್ನಲಾಗ್ತಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.