ETV Bharat / state

ಬಸ್​ ಚಾಲಕನ ಮೇಲೆ ಹಲ್ಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿಯ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ ಪೊಲೀಸ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಬಿಳಿಕೆರೆ ಪೊಲೀಸ್ ಠಾಣೆಯ ಎಸ್‌ಐ ಜಯಪ್ರಕಾಶ್ ಗುಂಡು ಹಾರಿಸಿ ಬಂಧಿಸಿದ್ದಾರೆ.

author img

By

Published : Feb 10, 2021, 9:49 AM IST

Mysore
ಚಾಕುವಿನಿಂದ ಇರಿದು ಹಲ್ಲೆ

ಮೈಸೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ, ತಪ್ಪಿಕೊಳ್ಳಲು ಯತ್ನಿಸಿದ ಹಲ್ಲೆಕೋರನ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಹುಣಸೂರಿನಲ್ಲಿ ಮಂಗಳವಾರ ನಡೆದಿದೆ.

ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಹತ್ತಿರದ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ, ಪೊಲೀಸ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜಯಂತ್ ಎಂಬಾತನ ಕಾಲಿಗೆ ಗುಂಡೇಟು ತಗುಲಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಇಬ್ಬರು ಪೊಲೀಸರನ್ನು ಹುಣಸೂರು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಯಂತ್ ಎಂಬಾತ ಪೊಲೀಸ್ ಕಾನ್ಸ್​ಟೇಬಲ್​ಗಳಾದ ಮುಖ್ಯ ರವಿ ಮತ್ತು ರವಿ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸುತ್ತಿದ್ದಾಗ, ಬಿಳಿಕೆರೆ ಪೊಲೀಸ್ ಠಾಣೆಯ ಎಸ್‌ಐ ಜಯಪ್ರಕಾಶ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ದಾರಿ ಬಿಡದಕ್ಕೆ ಆಕ್ರೋಶ: KSRTC ಬಸ್​ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ!

ಘಟನೆ:

ಜ. 22 ರಂದು ಕೆ.ಆರ್. ನಗರದಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಿಳಿಕೆರೆ ಬಳಿಯ ಹೊಸ ರಾಮನಹಳ್ಳಿಯ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಜಾಗ ಬಿಡಲಿಲ್ಲ ಎಂದು ಆಕ್ರೋಶಗೊಂಡ ಮೂವರು, ಬಸ್​ನ್ನು ಅಡ್ಡಗಟ್ಟಿ ಚಾಲಕ ವೆಂಕಟೇಶ್ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಪೊಲೀಸರು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು. ಮೂವರು ಆರೋಪಿಗಳು ಮೊಳಕಾಲ್ಮೂರಿನಲ್ಲಿ ಲಾಡ್ಜ್​​ನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಹಲ್ಲೆ ನಡೆಸಿದ ಜಯಂತ್, ವಿಘ್ನೇಶ್ ಮತ್ತು ದೀಪಕ್‌ನನ್ನು ವಶಕ್ಕೆ ಪಡೆದಿದ್ದಾರೆ. ನಂತರ ಬಿಳಿಕೆರೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್​​ಪೆಕ್ಟರ್ ರವಿ ಕುಮಾರ್ ಮತ್ತು ಎಸ್‌ಐ ಜಯಪ್ರಕಾಶ್ ಅವರು ಮೈಸೂರಿಗೆ ಕರೆದುಕೊಂಡು ಬರುವಾಗ, ಮಾರ್ಗಮಧ್ಯೆ ಮೂತ್ರ ವಿಸರ್ಜನೆ ಮಾಡಬೇಕೆಂದು ಜಯಂತ್ ವಾಹನ ನಿಲ್ಲಿಸುವಂತೆ ಹೇಳಿದ್ದಾನೆ. ಈ ವೇಳೆ ಕಾರನ್ನು ನಿಲ್ಲಿಸಿ ಇಬ್ಬರು ಕಾನ್ಸ್​ಟೇಬಲ್​ಗಳು ಆತನೊಂದಿಗೆ ತೆರಳಿದ್ದಾರೆ.

ಈ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ಜಯಂತ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಸ್ಥಳದಲ್ಲಿದ್ದ ಎಸ್‌ಐ ಜಯಪ್ರಕಾಶ್ ತಪ್ಪಿಸಿಕೊಂಡು ಹೋಗುತ್ತಿದ್ದ ಜಯಂತ್‌ನ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.

ಗಾಯಗೊಂಡ ಕಾನ್ಸ್​ಟೇಬಲ್​ ಅವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡೇಟಿನಿಂದ ಗಾಯಗೊಂಡ ಜಯಂತ್‌ನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸೇರಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಎಸ್ಪಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.