ಮೈಸೂರು: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾರಣ್ಯಪುರಂನಲ್ಲಿ ನಡೆದಿದೆ.
ಹೆಡ್ಕಾನ್ಸ್ಟೇಬಲ್ ಮಹೇಶ್ (39) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿದ್ಯಾರಣ್ಯಪುರಂ ನಿವಾಸಿಯಾಗಿದ್ದು ತನಗೆ ಮಕ್ಕಳಾಗಲಿಲ್ಲವೆಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ವಿವರ:
ಮಹೇಶ್ ತಂದೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಅನುಕಂಪದ ಆಧಾರದ ಮೇಲೆ ತಂದೆಯ ಸರ್ಕಾರಿ ಕೆಲಸ ಮಗನಿಗೆ ಸಿಕ್ಕಿತ್ತು. ಆದರೆ ಮಹೇಶ್ಗೆ ಮಕ್ಕಳಾಗದ ಕಾರಣ ಈ ವಿಷಯಕ್ಕೆ ಯಾವಾಗಲೂ ಕೊರಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.