ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಒಬ್ಬ ಮಹಿಳೆಯನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತಂತೆ ಮಾಹಿತಿ ಪಡೆದ ಪೊಲೀಸರು, ಡಿಸಿಪಿ ಗೀತಪ್ರಸನ್ನ ಹಾಗೂ ಸಿಸಿಬಿ ಘಟಕದ ಎಸಿಪಿ ಸಿ.ಕೆ. ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಮಹಿಳೆಯನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ದಾಳಿ ವೇಳೆ ವಿಜಯನಗರ ಠಾಣಾ ಪೊಲೀಸರು 21,500 ನಗದು, ಮೊಬೈಲ್ ಫೋನ್ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ನಗರದಲ್ಲಿ ಫೆಬ್ರವರಿ 26ರ ತನಕ ಕರ್ಫ್ಯೂ ಮುಂದುವರಿಕೆ