ಮೈಸೂರು: ಜಿಲ್ಲೆಯ ತಿ.ನರಸೀಪುರ ಪಟ್ಟಣದಲ್ಲಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಲಾಡ್ಜ್ ಮಾಲೀಕ ಮಹದೇವಯ್ಯ, ರೂಮ್ ಬಾಯ್ ಮಂಜು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಸಿದ್ದರಾಜು, ಮುರುಗ ಬಂಧಿತರು. ಬೆಂಗಳೂರು ಮತ್ತು ಯಳಂದೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಈ ಸಂಬಂಧ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.