ಮೈಸೂರು: ನಗರದ ಹಲವು ಪ್ರತಿಷ್ಠಿತ ಜನರಿಗೆ ಸೋಲಾರ್ ಪವರ್ ಪ್ರಾಜೆಕ್ಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ವಂಚಿಸಿರುವ 11 ಕಂಪನಿಗಳಿಗೆ ಹಣ ನೀಡಿರುವ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ನಗರದಲ್ಲಿ ಹಲವು ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಗೆ ಪವರ್ ಪ್ರಾಜೆಕ್ಟ್ ಕೊಡಿಸುತ್ತೇನೆ ಎಂದು 11 ಕಂಪನಿಗಳು ಕೋಟ್ಯಾಂತರ ರೂಪಾಯಿ ಹಣವನ್ನ ತಮ್ಮ ಸಂಸ್ಥೆಯ ಖಾತೆಗಳಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಈ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿರುವ ವ್ಯಕ್ತಿಗಳು ತಾವು ಹೂಡಿರುವ ಹಣದ ಬಗ್ಗೆ ಮಾಹಿತಿಯನ್ನ ಸಿಸಿಬಿ ಘಟಕಕ್ಕೆ ತಿಳಿಸಬೇಕೆಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಸಲಾಗಿದೆ.
ಓದಿ: ಗೋಮಾಂಸ ಮಾರದಂತೆ ಮಾರಾಟಗಾರರಿಗೆ ಖಡಕ್ ವಾರ್ನಿಂಗ್ ನೀಡಿದ ಚಿಕ್ಕಮಗಳೂರು ಪೊಲೀಸರು!