ಮೈಸೂರು: ಶ್ರೀಲಂಕಾದಲ್ಲಿ ಚರ್ಚ್ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಮೈಸೂರಿನ ಸಂತ ಫಿಲೋಮಿನಾ ಚರ್ಚ್ಗೆ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ನಿನ್ನೆ ಶ್ರೀಲಂಕಾದಲ್ಲಿ ಚರ್ಚ್‌ಗಳ ಮೇಲೆ ನಡೆದ ದಾಳಿಗೆ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಸಿದ್ಧ ಸಂತ ಫಿಲೋಮಿನಾ ಚರ್ಚ್ಗೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ದಿನದ 24 ಗಂಟೆಯೂ ಮೂರು ಪಾಳಿಯಲ್ಲಿ ಪೊಲೀಸ್ ಕಾವಲನ್ನು ಹಾಕಲಾಗಿದೆ.
ಪ್ರತಿ ಗಂಟೆಗೊಮ್ಮೆ ಗರುಡ ವಾಹನ ಭೇಟಿ ನೀಡಲಿದೆ. ಜೊತೆಗೆ ಬಾಂಬ್ ನಿಷ್ಕ್ರಿಯದಳ ಪ್ರತಿದಿನ ಚರ್ಚ್ಗೆ ಭೇಟಿ ನೀಡಿ ತಪಾಸಣೆ ನಡೆಸಲಿದೆ.