ಮೈಸೂರು: ಕೊರೊನಾ ಕರ್ಫ್ಯೂ ಉಲ್ಲಂಘಿಸಿ ಅನಾವಶ್ಯಕವಾಗಿ ನಗರದಲ್ಲಿ ಸುತ್ತಾಡುತ್ತಿದ್ದ ಬೈಕ್ ಸವಾರಿಗೆ ಪೊಲೀಸರು ಶಾಕ್ ನೀಡಿದ್ದು, 100 ಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.
ಲಾಕ್ಡೌನ್ ಹಿನ್ನೆಲೆ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿದ್ದು, ಜನರು ಮನೆಯೊಳಗೆ ಇರಬೇಕೆಂದು ಹೇಳಿದ್ದರು ಅನಾವಶ್ಯಕವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡುತ್ತಿದ್ದ 100 ಕ್ಕೂ ಹೆಚ್ಚು ಜನರ ಬೈಕ್ಗಳನ್ನು ಹುಣಸೂರು ಪಟ್ಟಣದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದರ ಜೊತೆ 5 ಕ್ಕೂ ಹೆಚ್ಚು ಕಾರುಗಳನ್ನು ಸಹ ವಶಪಡಿಸಿಕೊಂಡಿರುವ ಪೊಲೀಸರು ಏಪ್ರಿಲ್ 15 ನಂತರ ಬೈಕ್ಗಳ ಮೂಲ ದಾಖಲಾತಿಗಳನ್ನು ಪರಿಶೀಲನೆ ನಡೆಸಿ ಈ ಬೈಕ್ಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದು, ಮೆಡಿಕಲ್ ಹಾಗೂ ಇತರ ಅವಶ್ಯಕ ವಸ್ತುಗಳ ಖರೀದಿಗೆ ಬರುವವರಿಗೆ ರಿಯಾಯಿತಿ ಇದ್ದು, ಅನವಶ್ಯಕವಾಗಿ ಸುತ್ತಾಡುತ್ತಿದ್ದವರನ್ನು ಇನ್ನು ಮುಂದೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.