ETV Bharat / state

ಮೈಸೂರಿನಲ್ಲಿ 16 ಕೋಟಿ ವೆಚ್ಚದ ಪೊಲೀಸ್ ತರಬೇತಿ ಶಾಲೆ ಲೋಕಾರ್ಪಣೆ : ಗೃಹ ಸಚಿವ ಆರಗ ಜ್ಞಾನೇಂದ್ರ - ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ

ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Nov 10, 2022, 5:51 PM IST

ಮೈಸೂರು: ಇಂದು ಮೈಸೂರಿನಲ್ಲಿ ಪೊಲೀಸ್ ತರಬೇತಿ ಶಾಲೆ ಮತ್ತು ನೂತನ ಆಡಳಿತ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೂತನ ಕಟ್ಟಡವನ್ನು ವೀಕ್ಷಣೆ ಮಾಡಿದರು.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆನ್​ಲೈನ್​ ಎಫ್ಐ​​ಆರ್ ಜಾರಿಗೆ ತರಲಾಗಿದ್ದು, ಇ ಬೀಟ್ ಸಿಸ್ಟಮ್ ಮೂಲಕ ಮೊಬೈಲ್ ನಂಬರ್​ಗೆ ಎಸ್ ಎಂಎಸ್ ಕಳುಹಿಸಿದರೆ ಪೊಲೀಸ್ ಇಲಾಖೆ ನಿಮಗೆ ಸಹಾಯ ಮಾಡಲಿದೆ ಎಂದರು.

ಹರಿಯಾಣದಲ್ಲಿ ಎರಡನೇ ಉನ್ನತ ಮಟ್ಟದ ಅಧಿಕಾರಿಗಳ ಸಮಾವೇಶದಲ್ಲಿ ನಮ್ಮ ದೇಶದ ಗೃಹಸಚಿವರು ಕರ್ನಾಟಕದ ಪೊಲೀಸ್ ಇಲಾಖೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಉತ್ತಮ ತರಬೇತಿಯನ್ನು ಕರ್ನಾಟಕದಲ್ಲಿ ನಡೆಸಬೇಕು ಎಂದರು. ಇಂದು ಹಲವು ಕಟ್ಟಡಗಳು ಹಾಗೂ 16 ಕೋಟಿ ರೂಪಾಯಿ ವೆಚ್ಚದಲ್ಲಿ ಪೊಲೀಸ್ ತರಬೇತಿ ಶಾಲೆ ಉದ್ಘಾಟನೆ ಮಾಡಲಾಗಿದೆ. ಒಂದೇ ವರ್ಷದಲ್ಲಿ 200 ಕೋಟಿ ವೆಚ್ಚದಲ್ಲಿ ಸುಮಾರು 117 ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದರು

ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ: ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವುದು. ಹಾಗಾಗಿ ಸೈಬರ್ ಕ್ರೈಂ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿಶೇಷ ತರಬೇತಿ ಪಡೆದುಕೊಳ್ಳಬೇಕು. ಕಾನ್ಸ್​ಸ್ಟೇಬಲ್​​ಗಳಿಗೆ ಎಲ್ಲವೂ ಸಾಧ್ಯ. ದೊಡ್ಡ ದೊಡ್ಡ ಪ್ರಕರಣದಲ್ಲಿ ಕಾನ್ಸ್​ಸ್ಟೇಬಲ್​ ಪತ್ರ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.

ಒಳ್ಳೆಯ ಹೆಸರು ಕೊಡಬೇಕು: ಹಿಂದೆ ಪೊಲೀಸ್ ಇಲಾಖೆಗೆ ಮಹಿಳೆಯರು ಸೇರುತ್ತಿರಲಿಲ್ಲ. ಆದರೆ, ಈಗ ಎಲ್ಲ ವಿಭಾಗದಲ್ಲಿ ಮಹಿಳಾ ಪೊಲೀಸ್ ಇದ್ದಾರೆ. ಇದು ಸಂತಸ ತಂದಿದೆ. ಕಷ್ಟ ಪಟ್ಟು ಪರಿಶ್ರಮದಿಂದ ಕೆಲಸ ಮಾಡಿ ಪೊಲೀಸ್ ಇಲಾಖೆಗೆ ಸೇರಿ ಒಳ್ಳೆಯ ಹೆಸರು ಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಓದಿ: ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ.. ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.