ಮೈಸೂರು : ಹೊಸ ವರ್ಷಾಚರಣೆ ಹಾಗೂ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆ, ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳನ್ನು ಕರೆಸಿ ಪರೇಡ್ ನಡೆಸಲಾಯಿತು.
ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ಗಳನ್ನು ಬೆಳ್ಳಂಬೆಳಗ್ಗೆ ಠಾಣೆಗೆ ಕರೆಯಿಸಿ ಹೊಸ ವರ್ಷಾಚರಣೆ ಹಾಗೂ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ಯಾವುದೇ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಯಿತು. ಒಂದು ವೇಳೆ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.