ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಎ) ಬೆಂಬಲಿಸಿ ಬಿಜೆಪಿ ಎಸ್ಸಿ ಮೋರ್ಚಾ ಮೈಸೂರು ನಗರ (ಜಿಲ್ಲಾ) ಘಟಕದ ವತಿಯಿಂದ ಪತ್ರ ಚಳವಳಿ ನಡೆಸಿತು.
ನಗರದ ಪ್ರಧಾನ ಅಂಚೆ ಕಚೇರಿ ಬಳಿ ಜಮಾವಣೆಗೊಂಡ ಪಕ್ಷದ ಮೋರ್ಚಾದ ಮುಖಂಡರು ಮತ್ತು ಪೌರತ್ವ ಕಾಯ್ದೆ ಬೆಂಬಲಿಸುವವರು. ಕಾಯ್ದೆಯನ್ನು ಜಾರಿಗೆ ತಂದಿರುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಭಿನಂದನೆ ತಿಳಿಸುವ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು.
ಕೇಂದ್ರ ಸರ್ಕಾರ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸುತ್ತಿದೆ. ಕೇಂದ್ರ ಸರ್ಕಾರ ಜನಪರವಾಗಿ ಜಾರಿಗೆ ತರುವ ಯೋಜನೆಗಳನ್ನ ವಿರೋಧಿಸುವುದು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಕೆಲಸವೆಂದು ಹರಿಹಾಯ್ದರು.
ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರು, ಸಿಎಎಯಿಂದ ದೇಶದ ನಾಗರಿಕರಿಗೆ ತೊಂದರೆಯಾಗುವುದಿಲ್ಲವೆಂದು ಹೇಳುತ್ತಿದ್ದಾರೆ. ಆದರೆ,ದೇಶದ ಜನರ ದಿಕ್ಕು ತಪ್ಪಿಸಲು ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿವೆ ಎಂದು ಟೀಕಿಸಿದರು.