ಮೈಸೂರು: ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದಷ್ಟೇ ನಿಧನರಾಗಿದ್ದು, ದೇಶಾದ್ಯಂತ ಜರುಗಿದ ಅಭಿವೃದ್ಧಿ ಕೆಲಸಗಳಲ್ಲಿ ಇವರ ಹೆಸರು ಮುಂಚೂಣಿಯಲ್ಲಿತ್ತು.
ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ 2015 ರ ಜುಲೈ 27ರ ನಡೆದ ಮೈಸೂರು ಶತಮಾನೋತ್ಸವವನ್ನು ಉದ್ಘಾಟಿಸಿ, ಮೈಸೂರು ಪಾರಂಪರೆ ಹಾಗೂ ರಾಜರ ಬಗ್ಗೆ ಗುಣಗಾನ ಮಾಡಿದ್ದರು.
ಅಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ವಿ.ಶ್ರೀನಿವಾಸ್ ಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದರು.