ಮೈಸೂರು: ನಾಗರಹೊಳೆ 'ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ' ಎಂಬ ಹೆಸರನ್ನು ಬದಲಾಯಿಸಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶವೆಂದು ಮರುನಾಮಕರಣ ಮಾಡುವಂತೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ಉದ್ಯಾನವನ ಹರಡಿದ್ದು, 1955ರಲ್ಲಿ ಉದ್ಯಾನ ನಿರ್ಮಾಣ ಮಾಡಿದಾಗ 258 ಚದರ ಕಿ.ಮೀ. ಇತ್ತು. ನಂತರ ಮೈಸೂರು ಜಿಲ್ಲೆಯ ವಿವಿಧ ಪ್ರದೇಶಗಳನ್ನು ಸೇರಿಸಿಕೊಂಡಿದೆ. ಪ್ರಸ್ತುತ ಉದ್ಯಾನ 643.39 ಚದರ ಕಿ.ಮೀ. ಇದ್ದು, 1983ರಲ್ಲಿ ರಾಷ್ಟ್ರೀಯ ಉದ್ಯಾನವಾಗಿ ಘೋಷಣೆ ಮಾಡಲಾಯಿತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಿಪಿವೈ, ಹೆಚ್ಡಿಕೆ, ಡಿ ಕೆ ಸುರೇಶ್..!
'ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ' ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಆನ್‌ಲೈನ್ ಸಂಗ್ರಹ ಅಭಿಯಾನವೂ ಆರಂಭವಾಗಿದೆ. ಈ ಅಭಿಯಾನಕ್ಕೆ ಭಾನುವಾರ ರಾತ್ರಿಯತನಕ 6,400 ಜನರು ಸಹಿ ಮಾಡಿದ್ದಾರೆ.