ಮೈಸೂರು: ಮಾರಣಾಂತಿಕ ಹಲ್ಲೆಗೊಳಗಾಗಿ ಚೇತರಿಸಿಕೊಂಡಿರುವ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪಸಿಂಹ ಅವರ ಆರೋಗ್ಯ ವಿಚಾರಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಫಾರ್ಹನ್ ಪಾಷ ಎಂಬ ಯುವಕ ನ.17 ರಂದು ಮಾರಣಾಂತಿಕ ಹಲ್ಲೆ ಮಾಡಿ ಸಿಕ್ಕಿ ಬಿದ್ದಿದ್ದ. ನಂತರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ವೀರ್ ಸೇಠ್ ಚೇತರಿಕೆ ನಂತರ ವಿದೇಶಕ್ಕೆ ತೆರಳಿದ್ದರು.
ಇನ್ನು ಗುರುವಾರ ಆರೋಪಿಗಳನ್ನು ಗುರುತಿಸಲು ಪೊಲೀಸರು, ತನ್ವೀರ್ ಸೇಠ್ ಮೈಸೂರಿಗೆ ಆಗಮಿಸಿದ್ದರು. ಆರೋಪಿಗಳನ್ನು ಗುರುತಿಸಿದ ನಂತರ ಮೈಸೂರಿನ ತಮ್ಮ ನಿವಾಸಕ್ಕೆ ತೆರಳಿದ ತನ್ವೀರ್ ಸೇಠ್ ಅವರನ್ನು ಸಂಸದ ಪ್ರತಾಪಸಿಂಹ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.