ಮೈಸೂರು: ತಾರಕ ಜಲಾಶಯದ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಜಲಾಶಯದಿಂದ ಯಾವ ಕ್ಷಣದಲ್ಲಾದರೂ ನೀರು ಬಿಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ನೀಡಲಾಗಿದೆ.
ತಾರಕ ಜಲಾಶಯದ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ಒಳ ಹರಿವು ಹೆಚ್ಚಾಗಿದ್ದು, ಗರಿಷ್ಠ ಮಟ್ಟ ತಲುಪುವ ಹಂತದಲ್ಲಿದೆ. ಹೀಗಾಗಿ ಯಾವ ಕ್ಷಣದಲ್ಲಾದರೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ. ಅದಕ್ಕಾಗಿ ತಾರಕ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸ ಮಾಡುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳಿ ಮತ್ತು ಸುರಕ್ಷಿತ ಸ್ಥಳಗಳಿಗೆ ಹೋಗಿ ಎಂದು ತಾರಕ ಜಲಾಶಯದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೆಚ್.ಸಿ ನಾಗರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.