ETV Bharat / state

ಮೈಸೂರು ದಸರಾ: ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರ ಸಿದ್ಧಪಡಿಸಿ- ಡಾ.ಹೆಚ್.ಸಿ.ಮಹದೇವಪ್ಪ ಸಲಹೆ - ಮಂಗಳೂರು ಕುಕ್ಕರ್ ಬ್ಲಾಸ್ಟ್

ಮೈಸರೂ ದಸರಾ ಉತ್ಸವದಲ್ಲಿ ಸಮಾಜದ ಪರಿವರ್ತನೆಗೆ ಅನುಕೂಲವಾಗುವಂಥ ಪರಿಕಲ್ಪನೆಯ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ನೋಡಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ಇಂದು ನಡೆದ ಸಭೆಯಲ್ಲಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸಲಹೆ ನೀಡಿದರು.

ಡಾ ಹೆಚ್ ಸಿ ಮಹದೇವಪ್ಪ
ಡಾ ಹೆಚ್ ಸಿ ಮಹದೇವಪ್ಪ
author img

By ETV Bharat Karnataka Team

Published : Oct 3, 2023, 7:54 PM IST

Updated : Oct 3, 2023, 8:10 PM IST

ಮೈಸೂರು : ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣ ಸ್ತಬ್ಧಚಿತ್ರಗಳನ್ನು ದಸರಾ ಉತ್ಸವದ ಮೆರವಣಿಗೆಗೆ ಸಿದ್ಧಪಡಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಪರಿವರ್ತನೆಗೆ ಅನುಕೂಲವಾಗುವಂಥ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ಕಲೆ ಎಂಬುದು ಒಂದು ಸೃಜನಶೀಲ ಕ್ರಿಯೆ. ಜನರ ಮನಸ್ಸಿಗೆ ಮುದ ನೀಡುವ ಹಾಗೂ ಪ್ರಫುಲ್ಲವಾಗಿಸುವ ಶಕ್ತಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಚರಿತ್ರೆ, ಸ್ವಾತಂತ್ರ್ಯ ಹೋರಾಟ, ಸಾಂಸ್ಕೃತಿಕ ಬದುಕು, ಸಂಗೀತ, ಸಾಹಿತ್ಯ ಸೇರಿದಂತೆ ಸಾಮಾಜಿಕ ಸಂದೇಶ ನೀಡುವ ಸ್ತಬ್ಧಚಿತ್ರಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು ಎಂದರು.

ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯ ಪರ ಆಡಳಿತ ನಡೆಸಿದರು‌. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟವನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದು ಹೇಳಿದರು.

ಪ್ರತಿ ಜಿಲ್ಲೆಗೆ ಅದರದೇ ಆದಂತಹ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಐತಿಹಾಸಿಕ ಮಾಹಿತಿ ಜೊತೆಗೆ ಜೀವಂತವಾಗಿ ನಡೆದಿರುವಂತಹ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಹಾಗೂ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.

ಕಲಾವಿದರು ಸಂಪೂರ್ಣವಾಗಿ ತೊಡಗಿಸಿಕೊಂಡು ಸೃಜನಶೀಲತೆಯಿಂದ ಉತ್ತಮವಾದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ. ನಿಮಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಶಸ್ತಿ ಪತ್ರವನ್ನು ವಿಭಾಗೀಯ ಮಟ್ಟದಲ್ಲಿ ನೀಡಲಾಗುವುದು ಹಾಗೂ ಕಲಾವಿದರಿಗೂ ಪ್ರತ್ಯೇಕ ಪ್ರಶಸ್ತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸಲಾಗುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನಾವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದವು ಜಿಲ್ಲಾಡಳಿತ ನಿಗದಿಪಡಿಸಿದ ಅಳತೆ ಮೀರಬಾರದು ಎಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಸಭೆಯಲ್ಲಿ ಇದ್ದರು.

ದಸರಾ ಸಂದರ್ಭದಲ್ಲಿ ವಿದೇಶಗಳಿಂದಲೂ ಪ್ರವಾಸಿಗರು ಬರುವುದರಿಂದ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ತಿಳಿಸಿದರು. ಇಂದು ಅರಮನೆ ಆವರಣದಲ್ಲಿ ಫಿರಂಗಿಗಳಿಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ದಸರಾ ಗಜಪಡೆಗೆ ಹಾಗೂ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಪೊಲೀಸ್​ ಕುದುರೆಗಳಿಗೆ ವಸ್ತು ಪ್ರದರ್ಶನದ ಆವರಣದ ಪಕ್ಕದಲ್ಲಿ ಫೈರಿಂಗ್ ಕ್ಯಾನನ್ ಟ್ರೈನಿಂಗ್ ಮಾಡುತ್ತೇವೆ. ವಿಜಯದಶಮಿಯ ದಿನ ಅಕ್ಟೋಬರ್ 24ರಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುವಾಗ ಫೈನಲ್ ಫೈರಿಂಗ್ ಇರುತ್ತದೆ ಎಂದರು.

ನಗರ ಪೊಲೀಸ್ ಕಮಿಷನರ್​ ರಮೇಶ್​ ಬಾನೋತ್

ಸಾಮಾನ್ಯವಾಗಿ ರೋಟಿನ್ ರೀತಿಯಲ್ಲಿ ತಪಾಸಣೆ ಮಾಡುತ್ತಿರುತ್ತೇವೆ. ಆದರೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ಆದ ನಂತರ ಪ್ರತಿನಿತ್ಯವೂ ತಪಾಸಣೆ ನಡೆಸಲಾಗುತ್ತಿದೆ. ಅದರಲ್ಲೂ ದಸರಾ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ. ಬಂದೋಬಸ್ತ್ ಮತ್ತು ತಪಾಸಣೆ ಹೆಚ್ಚಿಸಿದ್ದೇವೆ. ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ತಿಳಿಸಿದರು.

ಇದನ್ನೂ ಓದಿ: ಮಾವುತರು, ಕಾವಾಡಿಗರಿಗೆ ಉಪಾಹಾರ ಬಡಿಸಿದ ಸಚಿವ ಡಾ.ಹೆಚ್.ಸಿ. ಮಹದೇವಪ್ಪ..

Last Updated : Oct 3, 2023, 8:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.