ETV Bharat / state

ದಸರಾವನ್ನು ಜನಸಾಮಾನ್ಯರ ಉತ್ಸವವನ್ನಾಗಿಸಿ: ಸಚಿವ ವಿ.ಸೋಮಣ್ಣ - latest news of v.somanna

ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಜನಸಾಮಾನ್ಯರ ಉತ್ಸವವನ್ನಾಗಿ ಮಾಡಲು ನಾವೆಲ್ಲಾ ಶ್ರಮಿಸೋಣವೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ  ಹೇಳಿದರು.

ದಸರಾವನ್ನು ಜನಸಾಮಾನ್ಯರ ಉತ್ಸವವನ್ನಾಗಿಸಿ: ಸಚಿವ ವಿ.ಸೋಮಣ್ಣ
author img

By

Published : Sep 27, 2019, 9:54 PM IST

Updated : Sep 28, 2019, 12:01 AM IST

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಜನಸಾಮಾನ್ಯರ ಉತ್ಸವವನ್ನಾಗಿ ಮಾಡಲು ನಾವೆಲ್ಲಾ ಶ್ರಮಿಸೋಣವೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಹೇಳಿದರು. ನಾಡಹಬ್ಬ ದಸರಾ ಪ್ರಯುಕ್ತ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೊಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ವಿ.ಸೋಮಣ್ಣ ಮಾತನಾಡಿ, ದಸರಾ ಅಚರಣೆ ಕುರಿತು ಮಾಹಿತಿ ನೀಡಿದರು.

ದಸರಾವನ್ನು ಜನಸಾಮಾನ್ಯರ ಉತ್ಸವವನ್ನಾಗಿಸಿ: ಸಚಿವ ವಿ.ಸೋಮಣ್ಣ

ಸೆ. 29 ರಂದು ಬೆಳಿಗ್ಗೆ 9.39ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವುದರೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ್ ಸಂಗಪ್ಪ ಸವದಿ, ಸಚಿವರಾದ ಸಿ.ಟಿ. ರವಿ, ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಪರಿಮಳ ಶ್ಯಾಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ವಹಿಸಲಿದ್ದಾರೆಂದು ವಿವರಿಸಿದರು.

ಆಕ್ಟೋಬರ್ 8ರ ಮಂಗಳವಾರ ಮಧ್ಯಾಹ್ನ 2.15ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆ ನೆರವೇರಲಿದೆ. ನಂತರ ಸಂಜೆ 4.31ರಿಂದ 4.57ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾಂಗಣದಲ್ಲಿ ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಪುಷ್ಪಲತ ಜಗನ್ನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್.ಎ ರಾಮದಾಸ್ ವಹಿಸುವರೆಂದು ವಿವರಿಸಿದರು.

ಇನ್ನೂ ಅದೇ ದಿನ ಸಂಜೆ 7 ಗಂಟೆಗೆ ನಗರದ ಬನ್ನಿ ಮಂಟಪದಲ್ಲಿ ಜರುಗುವ ಪಂಜಿನ ಕವಾಯತು ಪ್ರದರ್ಶನವನ್ನು ರಾಜ್ಯಪಾಲರಾದ ವಜುಭಾಯಿ ವಾಲಾರವರು ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸುವರು. ಈ ಟಾರ್ಚ್ ಲೈಟ್ ಪೆರೇಡ್ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ತನ್ವೀರ್ ಸೇಠ್ ವಹಿಸುವರೆಂದು ಹೇಳಿದರು.

ಇದಲ್ಲದೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 8ರವರೆಗೆ 7ಕ್ಕೂ ಹೆಚ್ಚು ಪರ್ಯಾಯ ವೇದಿಕೆಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ, ಈ ಬಾರಿಯ ದಸರಾದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಲ್ಲರೂ ನಾಡಹಬ್ಬದಲ್ಲಿ ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳುವ ಮೂಲಕ ಸ್ವಚ್ಚತೆ ಕಾಪಾಡಲು ಕೈಜೋಡಿಸಿ ಎಂದು ಮನವಿ ಮಾಡಿದರು.

Intro:ಸೋಮಣ್ಣBody:ದಸರಾವನ್ನು ಜನಸಾಮಾನ್ಯರ ಉತ್ಸವವನ್ನಾಗಿಸಿ: ಸಚಿವ ವಿ. ಸೋಮಣ್ಣ
ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಜನಸಾಮಾನ್ಯರ ಉತ್ಸವವನ್ನಾಗಿ ಮಾಡಲು ನಾವೆಲ್ಲಾ ಶ್ರಮಿಸೋಣ ಎಂದು ವಸತಿ ಸಚಿವರೂ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಹೇಳಿದರು.
ನಾಡಹಬ್ಬ ದಸರಾ ಪ್ರಯುಕ್ತ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೊಜಿಸಿದ್ದ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸೆ. 29 ರಂದು ಬೆಳಿಗ್ಗೆ 9.39ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವುದರೊಂದಿಗೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಲಕ್ಷ್ಮಣ್ ಸಂಗಪ್ಪ ಸವದಿ, ಸಚಿವರಾದ ಸಿ.ಟಿ. ರವಿ, ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಪರಿಮಳ ಶ್ಯಾಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ವಹಿಸುವರು ಎಂದು ವಿವರಿಸಿದರು.
ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸಿ.ಟಿ. ರವಿ, ಮೇಯರ್ ಪುಷ್ಪಲತ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಪರಿಮಳ ಶ್ಯಾಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಎಸ್.ಎ. ರಾಮದಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಆಕ್ಟೋಬರ್ 8ರ ಮಂಗಳವಾರ ಮಧ್ಯಾಹ್ನ 2.15ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆ ನೆರವೇರಲಿದೆ. ಆ ನಂತರ ಸಂಜೆ 4.31ರಿಂದ 4.57ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾಂಗಣದಲ್ಲಿ ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡುವರು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಪುಷ್ಪಲತ ಜಗನ್ನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್.ಎ. ರಾಮದಾಸ್ ವಹಿಸುವರು ಎಂದು ವಿವರಿಸಿದರು.
ಅದೇ ದಿನ ಸಂಜೆ 7 ಗಂಟೆಗೆ ನಗರದ ಬನ್ನಿ ಮಂಟಪದಲ್ಲಿ ಜರುಗುವ ಪಂಜಿನ ಕವಾಯತು ಪ್ರದರ್ಶನವನ್ನು ರಾಜ್ಯಪಾಲರಾದ ವಜುಭಾಯಿ ವಾಲಾ ರವರು ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸುವರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಲಕ್ಷ್ಮಣ್ ಸಂಗಪ್ಪ ಸವದಿ, ಸಚಿವರಾದ ಸಿ.ಟಿ. ರವಿ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ. ಪರಿಮಳ ಶ್ಯಾಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಟಾರ್ಚ್ ಲೈಟ್ ಪೆರೇಡ್ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ತನ್ವೀರ್ ಸೇಠ್ ವಹಿಸುವರು ಎಂದು ಹೇಳಿದರು.
ಇದಲ್ಲದೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 8ರವರೆಗೆ 7ಕ್ಕೂ ಹೆಚ್ಚು ಪರ್ಯಾಯ ವೇದಿಕೆಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಈ ಬಾರಿಯ ದಸರಾದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಲ್ಲರೂ ನಾಡಹಬ್ಬದಲ್ಲಿ ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳುವ ಮೂಲಕ ಸ್ವಚ್ಚತೆ ಕಾಪಾಡಲು ಕೈಜೋಡಿಸಿ ಎಂದು ಮನವಿ ಮಾಡಿದರು.Conclusion:ಸೋಮಣ್ಣ
Last Updated : Sep 28, 2019, 12:01 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.