ಮೈಸೂರು: ಕೊರೊನಾ ಸೋಂಕಿತ ಕೈದಿಯೊಬ್ಬ ಕೋವಿಡ್ ಸೆಂಟರ್ನಿಂದ ಪರಾರಿಯಾಗಿದ್ದಾನೆ.
ವಿಚಾರಣಾಧೀನ ಕೈದಿಯಾಗಿದ್ದ 21 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಈತ ಭಾನುವಾರ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಎಂದು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ, ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.