ETV Bharat / state

ಶ್ರಾವಣ ಶನಿವಾರಗಳಂದು ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ಇಲ್ಲ: ಡಿಸಿ ಆರ್ಡರ್​​​

author img

By

Published : Jul 24, 2020, 12:02 PM IST

ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.

ಅಭಿರಾಮ್ ಜಿ ಶಂಕರ್
ಅಭಿರಾಮ್ ಜಿ ಶಂಕರ್

ಮೈಸೂರು: ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರಾವಣ ಶನಿವಾರಗಳಂದು ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆಯಿಂದ ಶ್ರಾವಣ ಮಾಸ ಶುರುವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೋಂಕು ತಡೆಯುವ ನಿಟ್ಟಿನಲ್ಲಿ ಶನಿವಾರಗಳಂದು ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜುಲೈ 25, ಆಗಸ್ಟ್ 1, ಆಗಸ್ಟ್ 8 ಮತ್ತು ಆಗಸ್ಟ್ 15 ರಂದು ಅಂದರೆ 4 ಶನಿವಾರಗಳಂದು ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ದೇವಸ್ಥಾನದಲ್ಲಿ ನಡೆಯುವ ಉತ್ಸವ, ಸೇವೆ ಮತ್ತು ಜಾತ್ರೆಗಳನ್ನ ರದ್ದು ಮಾಡಲಾಗಿದೆ.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ದೇವಾಲಯ ಬಂದ್ ಮಾಡಲಿದ್ದು, ಉಳಿದಂತೆ ಧಾರ್ಮಿಕ ದತ್ತಿ ಇಲಾಖೆ, ಖಾಸಗಿ ಆಡಳಿತ ದೇವಾಲಯಗಳು ಸಹ ಬಂದ್ ಆಗಲಿದೆ. ದೇವಸ್ಥಾನದ ಒಳಗೆ ಧಾರ್ಮಿಕ ಪೂಜಾ ಕಾರ್ಯಗಳಿಗೆ ಅನುಮತಿ ನೀಡಲಾಗಿದೆ. ಅರ್ಚಕರು ಮಾತ್ರ ಪೂಜೆ ಸಲ್ಲಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.