ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ನಗರದ ಸಿಸಿಬಿ ಪೊಲೀಸರು, ನಾಲ್ವರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ರಾಮಕೃಷ್ಣನಗರ ರಾಮಣ್ಣ (51), ಜಯಪುರ ಹೋಬಳಿಯ ಗೀತಾ (38), ಮೇಟಗಳ್ಳಿ ನಿವಾಸಿ ರಾಧಾ (40) ಹಾಗೂ ವೆಂಕಟೇಶ (24) ಎಂಬುವರೆ ಬಂಧಿತ ಆರೋಪಿಗಳು.
ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ವಿಜಯನಗರ 4ನೇ ಹಂತ, 2ನೇ ಫೇಸ್ 4ನೇ ಕ್ರಾಸ್ನಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗೀತಾ ವಿರುದ್ಧ ಈ ಹಿಂದೆಯೂ ಕೂಡ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.