ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನ ರಾಜಕೀಯವಾಗಿ ಮುಗಿಸಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಯುವತಿಗೆ ನ್ಯಾಯ ಕೊಡಿಸುವ ನೆಪ ಇಟ್ಟುಕೊಂಡು, ಆಕೆಯಿಂದ ದಿನಕ್ಕೊಂದು ವಿಡಿಯೋ ಬಿಡುಗಡೆ ಮಾಡಿಸಿ, ರಮೇಶ್ ಜಾರಕಿಹೊಳಿ ಅವರನ್ನು ರಾಜ್ಯದಲ್ಲಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಇಂಥ ಕೀಳುಮಟ್ಟದ ರಾಜಕೀಯವನ್ನು ಡಿ.ಕೆ. ಶಿವಕುಮಾರ್ ಬಿಡಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಪಂಗಡದ ಯುವತಿಯನ್ನು ಮುಂದಿಟ್ಟುಕೊಂಡು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ನವರು ನೀಚ ರಾಜಕಾರಣ ಮಾಡುವುದು ಶೋಭೆ ತರುವಂಥದಲ್ಲ. ರಮೇಶ್ ಜಾರಕಿಹೊಳಿ ಕುಟುಂಬವನ್ನ ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.