ಮೈಸೂರು: ಮಹಿಷ ದಸರಾ ಆಚರಣೆಗೆ ಚಾಮುಂಡಿ ಬೆಟ್ಟದಲ್ಲಿ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ಸಿಂಹ ಅವರ ವಿರುದ್ಧ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಹೊರಟ ಮಹಿಷ ದಸರಾ ಆಚರಣಾ ಸಮಿತಿ ಸದಸ್ಯರು ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಆರ್ಟಿಒ ವೃತ್ತ ಮೂಲಕ ರಾಮಸ್ವಾಮಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿ, ಪ್ರತಾಪ್ಸಿಂಹ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದಿದ್ದಾರೆ.
ಮತ್ತೆ ಅಲ್ಲಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕಲಾಮಂದಿರದ ಆವರಣದಲ್ಲಿರುವ ಮಹಿಷನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಾಪ್ಸಿಂಹ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮೇಯರ್ ಪುರುಷೋತ್ತಮ್, ಪ್ರತಾಪ್ಸಿಂಹ ವಿರುದ್ಧ ಕಿಡಿಕಾರಿದರು.