ಮೈಸೂರು: ಉತ್ತರಪ್ರದೇಶ ಹಥ್ರಾಸ್ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಜನಾಂದೋಲನಗಳ ಮಹಾಮೈತ್ರಿ ಹಾಗೂ ಪ್ರಗತಿಪರರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಅತ್ಯಾಚಾರವೆಸಗಿ ಯುವತಿ ಮೇಲೆ ಬರ್ಬರವಾಗಿ ಹಲ್ಲೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹಸುಗಳನ್ನು ರಕ್ಷಿಸಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತೋರಿಸುತ್ತಿರುವ ಕಾಳಜಿಯನ್ನು ಹೆಣ್ಣು ಮಕ್ಕಳ ಮೇಲೆ ತೋರುತ್ತಿಲ್ಲ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲು ಮೊದಲು ಅಲ್ಲಿನ ಸರ್ಕಾರ ಮುಂದಾಗಬೇಕು ಎಂದು ಕಿಡಿಕಾರಿದರು.
ಎನ್ಸಿಆರ್ಬಿ ವರದಿಯ ಪ್ರಕಾರ, ಉತ್ತರಪ್ರದೇಶ ಅಪರಾಧ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದೆ. ಕೇಂದ್ರ ಸರ್ಕಾರ ಅಪರಾಧ ಪ್ರಕರಣಗಳು ಕಡಿಮೆಯಾಗಲು ವ್ಯವಸ್ಥೆ ಮಾಡಬೇಕು. ದೇಶದ ಪರಿಸ್ಥಿತಿ ಹೀಗೆ ಮುಂದುವರಿದರೆ ಹೆಣ್ಣು ಮಕ್ಕಳ ರಕ್ಷಣೆ ಹೇಗೆ ಮಾಡುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಗತಿಪರ ಚಿಂತಕ ಪ.ಮಲ್ಲೇಶ್ ಮಾತನಾಡಿ, ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಿಡಿಕಾರಿದರು.