ಮೈಸೂರು: ರಂಗೋಲಿ ಬಿಡಿಸುವ ಮೂಲಕ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿ ವಿರುದ್ಧ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿನೂತನವಾಗಿ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ರಂಗೋಲಿ ಸ್ಪರ್ಧೆ ಪ್ರತಿಭಟನೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಮಾತನಾಡಿ, ಸಿಎಎ, ಎನ್‌ಆರ್‌ಸಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.